Edited By: Ashraf Kammaje
Updated on:Aug 21, 2023 | 8:28 AM

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ: ಕಿಡಿಗೇಡಿಗಳು ಮಹಾತ್ಮ ಗಾಂಧೀಜಿ (Mahatma Gandhiji) ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಜಿಲ್ಲೆ ಭದ್ರಾವತಿ (Bhadravati) ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಹೊಳೆಹೊನ್ನೂರಿನ ಪ್ರಮುಖ ವೃತ್ತದಲ್ಲಿ ಗಾಂಧೀಜಿ ಪ್ರತಿಮೆಯನ್ನು 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿತ್ತು. ತಡರಾತ್ರಿ ಕಿಡಿಗೇಡಿಗಳು ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ
