| Edited By Ashraf Kammaje
Updated on:Aug 22, 2023 | 5:47 PM

BN Bache Gowda; ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂದು ಘೋಷಣೆ ಮಾಡಿದ್ದಾರೆ. ತಂದೆ, ಮಗ, ಮೊಮ್ಮಗ, ಮೊಮ್ಮಗಳು ರಾಜಕಾರಣಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಹಿಗಾಗಿ ನಿವೃತ್ತಿಯಾಗುತ್ತಿದ್ದೇನೆ. ಚುನಾವಣಾ ರಾಜಕೀಯದಲ್ಲಿ ಇರದಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂದು ಬಿಎನ್ ಬಚ್ಚೇಗೌಡ ಹೇಳಿದ್ದಾರೆ

ಚಿಕ್ಕಬಳ್ಳಾಪುರ, ಆಗಸ್ಟ್ 22: ಬಿಜೆಪಿ ಸಂಸದ ಬಿ.ಎನ್. ಬಚ್ಚೆಗೌಡ (Bache Gowda) ಮಂಗಳವಾರ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ (Chikkaballapur Lok Sabha Constituency) ಬಿಜೆಪಿ ಸಂಸದರಾಗಿರುವ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಈಗ ನನಗೆ ಎಂಬತ್ತೊಂದು ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ ಆಚರಣೆ ಮಾಡಿಕೊಂಡಿದ್ದೇವೆ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಅಂತ ಪ್ರಧಾನಿ ಮೋದಿ ಹೇಳಿಬಿಟ್ಟಿದ್ದಾರೆ. ಹೀಗಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೋದಿ ಅವರು ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂದು ಘೋಷಣೆ ಮಾಡಿದ್ದಾರೆ. ತಂದೆ, ಮಗ, ಮೊಮ್ಮಗ, ಮೊಮ್ಮಗಳು ರಾಜಕಾರಣಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಹಿಗಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಚುನಾವಣಾ ರಾಜಕೀಯದಲ್ಲಿ ಇರದಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂದು ಅವರು ಹೇಳಿದ್ದಾರೆ.

ನಿವೃತ್ತಿ ಘೋಷಣೆ ಬೆನ್ನಲ್ಲೇ ಕೇಂದ್ರದ ವಿರುದ್ಧ ವಾಗ್ದಾಳಿ!
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ಬಚ್ಚೇಗೌಡ ಅವರು ಕೇಂದ್ರ ಸರ್ಕಾರದ ಕೆಲವು ನಿರ್ಧಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ ಎಂದು ಅವರು ಸ್ವಪಕ್ಷದ ಸರ್ಕಾರದ ವಿರುದ್ಧವೇ ಸಂಸದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಹಣ ನೀಡುತ್ತೇವೆ ಎಂದರೂ ಅಕ್ಕಿ ನೀಡದಿರುವುದು ತಪ್ಪು. ನಾನು ರಾಜ್ಯದ ಸಂಸದನಾಗಿ ಹೇಳುತ್ತಿದ್ದೇನೆ, ಅಕ್ಕಿ ಕೊಡದಿರುವುದು ತಪ್ಪು. ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡದೆ ಅನ್ಯಾಯ ಮಾಡಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದು ತಪ್ಪು
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದು ತಪ್ಪು ಎಂದು ಬಚ್ಚೇಗೌಡ ಅವರು ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. ನನ್ನ ಪ್ರಕಾರ ಈ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವುದು ತಪ್ಪು. ನೀರಿಲ್ಲದೆ ನಮಗೆ ತೊಂದರೆ ಆಗುತ್ತಾ ಇದೆ. ಕಾವೇರಿ ನೀರು ಬಿಡುವುದಕ್ಕೆ ನನ್ನ ವಿರೋಧ ಇದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಪಕ್ಷ ಸಭೆ ಕರೆದಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಸರಿಯಾದ ತೀರ್ಮಾನ ತಅವರಯ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಕಾವೇರಿ ಮಂಡ್ಯಕ್ಕೆ ಮಾತ್ರ ಸೀಮಿತವಾಗಿಲ್ಲ, ಇಡೀ ಕರ್ನಾಟಕಕ್ಕೆ ಸಂಬಂಧಪಟ್ಟಿದೆ ಎಂದು ಅವರು ಹೇಳಿದ್ದಾರೆ.