Edited By: Ashraf Kammaje
Updated on:Aug 26, 2023 | 8:55 AM

ರಾಮೇಶ್ವರನಿಂದ ಕನ್ಯಾಕುಮಾರಿಗೆ ಹೊರಟ್ಟಿದ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಎಂಟು ಜನ ಸಾವನ್ನಪ್ಪಿದ್ದಾರೆ. ಇನ್ನು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಧುರೈ ಆ.26: ಮಧುರೈ (Madurai) ರೈಲು (Train) ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಘಟನೆಯಲ್ಲಿ ಎಂಟು ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಮದುರೈನಲ್ಲಿ ನಿಲ್ಲಿಸಿದ್ದ ಈ ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು.

ಮಧುರೈನಲ್ಲಿ ಏಕಾಏಕಿ ಬೆಂಕಿ ಅಗ್ನಿ ಅವಘಡ ಸಂಭವಿಸಿದಾಗ ರೈಲನ್ನು ನಿಲ್ಲಿಸಲಾಗಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ ಈ ರೈಲಿನಲ್ಲಿದ್ದ ಭಕ್ತರು ಗ್ಯಾಸ್ ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ. ಒಂದು ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೇರೆ ಬೋಗಿಗಳಿಗೆ ಬೆಂಕಿ ವ್ಯಾಪಿಸಿದೆ. ರೈಲಿನಲ್ಲಿ 60ಕ್ಕೂ ಹೆಚ್ಚು ಮಂದಿ ಇದ್ದರು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನೂ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ. ಮೂರು ಮೃತದೇಹಗಳನ್ನು ಗುರುತಿಸಲಾಗಿದೆ.