Ashraf Kammaje|
Updated on: Aug 29, 2023 | 3:00 PM

Government May Announce Decision To Cut LPG Prices: ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು 200 ರೂನಷ್ಟು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಸದ್ಯ 14 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಇದ್ದು, ಇದು 900 ರೂಗೆ ಇಳಿಕೆಯಾಗುವ ಸಾಧ್ಯತೆ ಇದೆ. ಆಗಸ್ಟ್ 30 ಅಥವಾ 31ರಂದು ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಘೋಷಿಸಬಹುದು.

ನವದೆಹಲಿ, ಆಗಸ್ಟ್ 29: ಎಲ್ಪಿಜಿ ಸಿಲಿಂಡರ್ಗಳ ಬೆಲೆ 200 ರೂನಷ್ಟು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಮುಂದಿನ 24 ಗಂಟೆಗಳಲ್ಲಿ, ಅಂದರೆ ಆಗಸ್ಟ್ 30ರಷ್ಡರಲ್ಲಿ ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಪ್ರಟಿಸಬಹುದು ಎಂದು ಮೂಲಗಳಿಂದ ಮಾಹಿತಿ ಆಧರಿಸಿ ಇಂಡಿಯಾಟಿವಿ ನ್ಯೂಸ್ ವರದಿ ಮಾಡಿದೆ. ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ.
