
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕೊಯಿಲ ನಿವಾಸಿ ರಾಘವೇಂದ್ರ ಭಟ್ ಎಂಬಾತನು ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಧರ್ಮಸ್ಥಳದಲ್ಲಿ ಹತ್ಯೆಯಾದ ಸೌಜನ್ಯಾ ಎಂಬವರ ತಾಯಿ ಬಗ್ಗೆ ಆಕ್ಷೇಪಾರ್ಹ ಬರವಣಿಗೆ ಹಾಕಿರುವುದು ಕಂಡು ಬಂದಿದೆ.
ಈ ಬಗ್ಗೆ ಆ. 28ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


