
ಉಡುಪಿ, ಸೆ 05 (HAYATH TV): ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ, ಐಪಿಎಸ್ ಅವರನ್ನು ನೇಮಕ ಮಾಡಲಾಗಿದೆ.
ಹಾಕೆ ಅಕ್ಷಯ್ ಮಚಿಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.ಡಾ ಅರುಣ್ ಕೆ ಅವರು ಪೊಲೀಸ್ ಅಧೀಕ್ಷಕರಾಗಿ ಮತ್ತು ಕಲಬುರ್ಗಿಯ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.

ಇದರೊಂದಿಗೆ ಕರಾವಳಿ ಭದ್ರತಾ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಪೊಲೀಸ್ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

