| Edited By: Ashraf Kammaje
Updated on:Sep 13, 2023 | 7:45 AM

Cheating Case: ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿ 4 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದ ಅಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಸೆ.13: ಬೆಂಗಳೂರು ಸೆ.13: ವಂಚನೆ ಆರೋಪದ ಅಡಿ ಹಿಂದೂ ಕಾರ್ಯಕರ್ತೆ (Hindu Activist) ಚೈತ್ರಾ ಕುಂದಾಪುರ (Chaitra Kundapur) ಅವರನ್ನು ccb ಪೊಲೀಸರು (CCB Police) ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.

ಇಲ್ಲಿ ಚೈತ್ರಾ ಕುಂದಾಪುರ ಕೆಲವರಿಗೆ ಒಳ್ಳೆ ಒಳ್ಳೆ ಬಟ್ಟೆ ಹಾಕಿಸಿ, ಇವರೇ ಹೈಕಮಾಂಡ್ ನಾಯಕರು ಎಂದು ನಂಬಿಸುತ್ತಿದ್ದರು. ಇವರು ಹೇಳಿದ ಮೇಲೆ ಟಿಕೆಟ್ ನಿಮಗೆ ಸಿಗುತ್ತದೆ ಎಂದು ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಟ್ಟಿದ್ದರು.

ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
