| Edited By: Ashraf Kammaje
Updated on: Sep 13, 2023 | 11:34 Am

Chaitra Kundapura Arrested ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂ ಎನ್ನುವರಿಗೆ ಸಂಕಷ್ಟ ಎದುರಾಗಿದೆ.
ಉಡುಪಿ, (ಸೆಪ್ಟೆಂಬರ್ 13): ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರ ಕುಂದ್ರಾಪುರ (Chaitra Kundapura) ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ (bengaluru CCB) ಪೊಲೀಸರು ಬಂಧಿಸಿದ್ದಾರೆ. ನಿನ್ನೆ (ಸೆಪ್ಟೆಂಬರ್ 12) ರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದಲ್ಲಿ ಚೈತ್ರಾ ಸಿಕ್ಕಿಬಿದ್ದಿದ್ದಾಳೆ. ಇನ್ನು ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದಳು ಎನ್ನುವ ಮಾಹಿತಿ ತಿಳಿದುಬಂದಿದೆ. ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ.

ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಚೈತ್ರಾಗೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂ ಎನ್ನುವರ ನಿವಾಸದಲ್ಲಿ ಅವಿತುಕೊಂಡಿದ್ದರು ಎಂದು ತಿಳಿದುಬಂದಿದ್ದು, ಇದೀಗ ಚೈತ್ರಾಗೆ ಆಶ್ರಯ ನೀಡಿದ್ದ ಅಂಜುಂಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದರಿಂದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಂಕಷ್ಟ ಎದುರಾಗಿದೆ.

ಇನ್ನು ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳನ್ನು ಉಡುಪಿಯಿಂದ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದು, ಇಂದು (ಸೆಪ್ಟೆಂಬರ್ 13) ಸಂಜೆ ವೇಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಅಲ್ಲದೇ ಇನ್ನಷ್ಟು ತನಿಖೆ ಮಾಡಬೇಕಿರುವುದರಿಂದ ತಮ್ಮ ವಶಕ್ಕೆ ಕೇಳುವ ಸಾಧ್ಯತೆಗಳು ಹೆಚ್ಚಿವೆ.

