
ದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದದ ಸಂಬಂಧ ಇಂದು ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. CWMA ಆದೇಶ ತಡೆಕೋರಿ ಅರ್ಜಿ ಸಲ್ಲಿಸಿದೆ. ಇಂದು ಬೆಳಗ್ಗೆ 10.30ಕ್ಕೆ ನ್ಯಾ.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಕಾವೇರಿ ಅರ್ಜಿ ವಿಚಾರಣೆ ನಡೆಯಲಿದೆ.

ಕೇಂದ್ರ ಸಚಿವರನ್ನ ಭೇಟಿ ಮಾಡಲಿರುವ CM, DCM : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ. ಸಿಎಂ ನೇತೃತ್ವದ ನಿಯೋಗವು ಶೇಖಾವತ್ ಭೇಟಿಯಾಗಲಿದೆ. ಬೆಳಗ್ಗೆ 9.30ಕ್ಕೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಶೇಖಾವತ್ ಭೇಟಿ ಮಾಡಲಿದ್ಧಾರೆ. ಕೇಂದ್ರ ಸಚಿವರು, ಪ್ರಮುಖ ಸಂಸದರು ಭಾಗಿ ಸಾಧ್ಯತೆಗಳಿವೆ.

