
ಪುತ್ತೂರು, ಅ.2: ಪುತ್ತೂರಿನ ಬಿಜೆಪಿ ಕಾರ್ಯಕರ್ತನೋರ್ವ ಯುವತಿ ಜೊತೆಗೆ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್ ಆಗಿದೆ. ನವೀನ್ ರೈ ಕೈಕಾರ ಎಂಬಾತ ಮಹಿಳೆಯೊಂದಿಗಿದ್ದಾಗ ಸೆಲ್ಫಿ ತೆಗೆದಿದ್ದ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಜೊತೆಗೆ ಆಪ್ತನಾಗಿ ಗುರುತಿಸಿಕೊಂಡಿದ್ದ ನವೀನ್ ರೈ ಕೈಕಾರ ಎಂಬಾತನ ಖಾಸಗಿ ಕ್ಷಣಗಳ ಫೋಟೋ ವೈರಲ್ ಆಗಿದೆ. ಚುನಾವಣೆ ಸಂದರ್ಭದಲ್ಲಿ ಪುತ್ತಿಲ ಪರಿವಾರಕ್ಕೆದುರಾಗಿ ಬಿಜೆಪಿ ಪರ ಕೆಲಸ ಮಾಡಿದ್ದ ನವೀನ್ ರೈ ಪುತ್ತೂರಿನಲ್ಲಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು.

ಫೋಟೊ ವೈರಲ್ ಬೆನ್ನಲ್ಲೇ ನವೀನ್ ರೈ, ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನ್ನ ಫೋಟೋವನ್ನ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆಂದು ದೂರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಮಾನಹಾನಿ ಮಾಡಿರುವುದಾಗಿ ಆರೋಪಿಸಿದ್ದಾರೆ. ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1 ಎಂಬ ವಾಟ್ಸಾಪ್ ಗ್ರೂಪಿನಲ್ಲಿ ವೈರಲ್ ಮಾಡಿರುವುದಾಗಿ ದೂರು ನೀಡಿದ್ದಾರೆ.

