
ಮುಂಬೈ: ಕಳೆದ 24 ಗಂಟೆಯಲ್ಲಿ 12 ನವಜಾತ ಶಿಶುಗಳು, 12 ವಯಸ್ಕರು ಸೇರಿ 24 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ನಾದೆಂಡ್ನ ಸರ್ಕಾರಿ ಆಸ್ಪತ್ರೆಯಲ್ಲಿ (Nanded Hospital) ನಡೆದಿದೆ.
ಹಾವು ಕಡಿತ ಸೇರಿದಂತೆ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಲ್ಲಿ 24 ಗಂಟೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 6 ಗಂಡು ಹಾಗೂ 6 ಹೆಣ್ಣು ಶಿಶುಗಳು ಸೇರಿ 12 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ನಾಂದೇಡ್ನ ಸರ್ಕಾರಿ ಆಸ್ಪತ್ರೆಯ ಡೀನ್ ಶಂಕರರಾವ್ ಚವ್ಹಾಣ ಹೇಳಿದ್ದಾರೆ. ಈ ಘಟನೆಗೆ ಔಷಧಿ (Medicines) ಮತ್ತು ಆಸ್ಪತ್ರೆ ಸಿಬ್ಬಂದಿ ಕೊರತೆಯೇ ಕಾರಣ ಎಂದು ದೂಷಿಸಿದ್ದಾರೆ.

ಸಾವು ನೋವಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸಂತಾಪ ಸೂಚಿಸಿದ್ದಾರೆ.
