
ತುಮಕೂರು: ಸುಳ್ಳು ಪೋಸ್ಟ್ ಹಿನ್ನೆಲೆಯಲ್ಲಿ ಬಿಜೆಪಿ (BJP) ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.
ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ (Shakuntala Nataraj) ಲುಲು ಶಾಪಿಂಗ್ ಮಾಲ್‍ನಲ್ಲಿ (Lulu Shopping Mall) ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಈ ಸಂಬಂಧ ತುಮಕೂರಿನ ಜಯನಗರ ಠಾಣೆಯಲ್ಲಿ (Jayanagar Police Station) ಸುಮುಟೋ ಕೇಸ್ ದಾಖಲಿಸಲಾಗಿತ್ತು.

ಪೋಸ್ಟ್ ನಲ್ಲೇನಿತ್ತು..?: ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್‍ನವರಿಗೆ? ಬಾಯ್ಕಾಟ್ ಲುಲುಮಾಲ್ ಹ್ಯಾಸ್ ಟ್ಯಾಗ್ ಬಳಸಿ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದರು.

ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಈಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೇಳಿಕೆ ಆರೋಪದ ಮೇಲೆ ಶಕುಂತಲಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.