
ಗಾಜಾ ಆಸ್ಪತ್ರೆಯ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ 500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಮೂಲಗಳ ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಇಸ್ರೇಲಿ ವಾಯುದಾಳಿಯಿಂದ ಸ್ಫೋಟ ಸಂಭವಿಸಿದೆ ಎಂದು ಹಮಾಸ್ ಹಿಡಿತದಲ್ಲಿರುವ ಗಾಜಾ ಪಟ್ಟಿಯಲ್ಲಿರುವ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ,

ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಮಾತನಾಡಿ 500ಕ್ಕೂ ಅಧಿಕ ಮಂದು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕರ್ತರು ಇನ್ನೂ ಅವಶೇಷಗಳಿಂದ ದೇಹಗಳನ್ನು ತೆಗೆಯುತ್ತಿದ್ದಾರೆ ಎಂದು ಹೇಳಿದರು. ಗಾಜಾದ ಆರೋಗ್ಯ ಅಧಿಕಾರಿಗಳು ಇಸ್ರೇಲ್‌ನ 11 ದಿನಗಳ ಬಾಂಬ್ ದಾಳಿಯಲ್ಲಿ ಕನಿಷ್ಠ 3,000 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಈ ದಾಳಿಯನ್ನು ಅಮೆರಿಕ ಅಧ್ಯಕ್ಷ ಜೋ ಬಿಡನ್ ಖಂಡಿಸಿದ್ದಾರೆ,ಗಾಜಾದ ಅಲ್ ಅಹ್ಲಿ ಅರಬ್ ಆಸ್ಪತ್ರೆಯಲ್ಲಿ ಸಂಭವಿಸಿದ ಸ್ಫೋಟ ಮತ್ತು ಅದರ ಪರಿಣಾಮವಾಗಿ ಸಂಭವಿಸಿದ ಭೀಕರ ಪ್ರಾಣಹಾನಿಯಿಂದ ನಾನು ಆಕ್ರೋಶಗೊಂಡಿದ್ದೇನೆ ಮತ್ತು ತೀವ್ರವಾಗಿ ದುಃಖಿತನಾಗಿದ್ದೇನೆ,ಇಸ್ರೇಲಿ ಪ್ರಧಾನಿ ನೇತನ್ಯಾಹು ಅವರೊಂದಿಗೆ ಮಾತನಾಡಿದ್ದೇನೆ ಎಂದರು.
