
ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿರುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಅಕ್ಟೋಬರ್ 19: ಈಗ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ (Israel-Hamas conflict) ಮಧ್ಯೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಪ್ಯಾಲೆಸ್ತೀನ್ (Palestine) ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾದ ಅಲ್-ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕ ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಭಾರತವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುತ್ತದೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ, ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವಗಳ ನಿಲುವನ್ನು ಪುನರುಚ್ಚರಿಸಿದರು.

ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ. ಆತಂಕದ ಬಗ್ಗೆಯೂ ಮಾತನಾಡಿದ್ದು, ಈ ಪ್ರದೇಶದಲ್ಲಿ ಹಿಂಸಾಚಾರ ಮತ್ತು ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವದ ನಿಲುವನ್ನು ಪುನರುಚ್ಚರಿಸಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಅನಿರೀಕ್ಷಿತ ಆಕ್ರಮಣದ ನಂತರ ಇಸ್ರೇಲ್-ಹಮಾಸ್ ಯುದ್ಧ ಭುಗಿಲೆದ್ದ ನಂತರ ಪ್ರಧಾನಿ ಮೋದಿ ಪ್ಯಾಲೆಸ್ತೀನ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಇದೇ ಮೊದಲು.
ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮೊದಲು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಗಾಜಾದ ಆಸ್ಪತ್ರೆಯೊಂದರ ಮೇಲೆ ನಡೆದ ದಾಳಿಯಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿದ ವರದಿಯ ನಂತರ ನಡೆಯುತ್ತಿರುವ ಸಂಘರ್ಷದ ನಾಗರಿಕ ಸಾವುನೋವುಗಳ ಬಗ್ಗೆ ಪ್ರಧಾನಿ ಮೋದಿ ಬುಧವಾರ ಆಘಾತ ಮತ್ತು ಕಳವಳ ವ್ಯಕ್ತಪಡಿಸಿದರು.