
ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ವರ್ತೂರು ಸಂತೋಷ್ ಅವರಿಗೆ ಜಾಮೀನು ನೀಡಲಾಗಿದೆ. 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ. ಇಂದು (ಅಕ್ಟೋಬರ್ 27) ಸಂಜೆ ವೇಳೆಗೆ ವರ್ತೂರು ಸಂತೋಷ್ ಬಿಡುಗಡೆ ಆಗಲಿದ್ದಾರೆ.

ಹುಲಿ ಉಗುರು (Tiger Claw Pendant) ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಈಗ ಜಾಮೀನು ಸಿಕ್ಕಿದೆ. ಇಷ್ಟು ದಿನಗಳ ಕಾಲ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದರು. ಸದ್ಯಕ್ಕೆ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು (Bail) ನೀಡಲಾಗಿದೆ. 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ. ಇಂದು (ಅಕ್ಟೋಬರ್ 27) ಸಂಜೆ ವೇಳೆಗೆ (Varthur Santhosh) ಬಿಡುಗಡೆ ಆಗಲಿದ್ದಾರೆ. ಮತ್ತೆ ಅವರು ಬಿಗ್ ಬಾಸ್ನಲ್ಲಿ ಸ್ಪರ್ಧಿಸುತ್ತಾರಾ ಎಂಬ ಕೌತುಕ ಮೂಡಿದೆ.

ಹಳ್ಳಿಕಾರ್ ತಳಿಯ ಹಸುಗಳ ಸಂರಕ್ಷಣೆ ಮಾಡುವ ಮೂಲಕ ವರ್ತೂರು ಸಂತೋಷ್ ಖ್ಯಾತಿ ಗಳಿಸಿದ್ದರು. ಅದೇ ಆಧಾರದಲ್ಲಿ ಅವರು ಬಿಗ್ ಬಾಸ್ಗೆ ಆಯ್ಕೆ ಆಗಿದ್ದರು. ಟ್ರೋಫಿ ಗೆಲ್ಲಬೇಕು ಎಂಬ ಆಸೆಯಿಂದ ಅವರು ದೊಡ್ಮನೆ ಪ್ರವೇಶಿಸಿದ್ದರು. ಆದರೆ ಅವರು ಧರಿಸಿದ್ದ ಹುಲಿ ಉಗುರಿನ ಪೆಂಡೆಂಟ್ ಮೇಲೆ ಅರಣ್ಯಾಧಿಕಾರಿಗಳ ಕಣ್ಣು ಬಿತ್ತು. ಅಕ್ಟೋಬರ್ 22ರ ರಾತ್ರಿ ಬಿಗ್ ಬಾಸ್ ಮನೆಗೆ ಹೋಗಿ ಅವರನ್ನು ಬಂಧಿಸಲಾಯಿತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ಜಾಮೀನು ಸಿಕ್ಕಿದೆ.
