
ಮಂಗಳೂರು: 8 ವರ್ಷದ ಮಗನೊಂದಿಗೆ ಗಂಡ ಹೆಂಡತಿ ಮೃತಪಟ್ಟ ಸ್ಥಿತಿಯಲ್ಲಿ ಮುಲ್ಕಿ ಠಾಣಾ ವ್ಯಾಪ್ತಿಯ ಪಡುಪಣಂಬೂರಿನ ಕಲ್ಲಾಪುವಿನಲ್ಲಿ ಪತ್ತೆಯಾಗಿದೆ.
ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (36) ಮತ್ತು ಎಂಟು ವರ್ಷದ ಮಗ ಸಾಧ್ಯ ಮನೆಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೇಲ್ನೋಟಕ್ಕೆ ಇದೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಎಂದು ಶಂಕಿಸಲಾಗಿದೆ.
ವಿನೋದ್ ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು, ಲಾಕ್‌ಡೌನ್ ಬಳಿಕ ಊರಲ್ಲೇ ರಿಯಲ್ ಎಸ್ಟೇಟ್ ವ್ಯವಹಾರ ಪ್ರಾರಂಭಿಸಿದ್ದರು.
ಆದಿತ್ಯವಾರದಿಂದ ಕುಟುಂಬದ ಯಾವೊಬ್ಬ ಸದಸ್ಯನೂ ಹೊರಬರದ ಹಿನ್ನೆಲೆಯಲ್ಲಿ ಶಂಕೆಗೊಂಡ ನೆರೆಯವರು ಕಿಟಕಿ ಮೂಲಕ ನೋಡಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶನಿವಾರ ಸಂಜೆಯೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಆತ್ಮಹತ್ಯೆ ಗೆ ಕಾರಣ ತಿಳಿದುಬಂದಿಲ್ಲ.
ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
