
ಡಿಸಿಎಂ ಡಿಕೆ ಶಿವಕುಮಾರ್ ಲೆಟರ್ ಹೆಡ್ನಲ್ಲಿ ವೈರಲ್ ಆದ ನಕಲಿ ಪತ್ರದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಂ.ಎನ್.ರಾಜೇಂದ್ರ ಪ್ರಸಾದ್ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ. ಕರ್ನಾಟಕ ಸರ್ಕಾರದ ಲೆಟರ್ ಹೆಡ್ ಮತ್ತು ಡಿಕೆ ಶಿವಕುಮಾರ್ ಸಹಿ ನಕಲು ಮಾಡಿದ ಆರೋಪ ಕೇಳಿಬಂದಿದೆ.

ಬೆಂಗಳೂರು, ನವೆಂಬರ್ 04: ಡಿಸಿಎಂ ಡಿಕೆ ಶಿವಕುಮಾರ್ ಲೆಟರ್ ಹೆಡ್ನಲ್ಲಿ ವೈರಲ್ ಆದ ನಕಲಿ ಪತ್ರದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಂ.ಎನ್.ರಾಜೇಂದ್ರ ಪ್ರಸಾದ್ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ. ಕರ್ನಾಟಕ ಸರ್ಕಾರದ ಲೆಟರ್ ಹೆಡ್ ಮತ್ತು ಡಿಕೆ ಶಿವಕುಮಾರ್ ಸಹಿ ನಕಲು ಮಾಡಿದ ಆರೋಪ ಕೇಳಿಬಂದಿದೆ. ಆ್ಯಪಲ್ ಏರ್ಪೋಡ್ ಉತ್ಪಾದನಾ ಘಟಕವನ್ನು ಹೈದರಾಬಾದ್ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಬರೆದಿದ್ದ ನಕಲಿ ಪತ್ರ ವೈರಲ್ ಆಗಿದೆ. ನಕಲಿ ಪತ್ರ ಸೃಷ್ಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನಿತ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಳಂದ ಶಾಸಕ ಬಿಆರ್ ಪಾಟೀಲ್ ಅವರ ಲೆಟರ್‌ಹೆಡ್ ಬಳಸಿ ಪತ್ರ ಬರೆದು ವೈರಲ್ ಮಾಡಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಶಾಸಕ ಬಿಆರ್ ಪಾಟೀಲ್, ನನ್ನ ಹಳೆಯ ಲೆಟರ್‌ಹೆಡ್ ಬಳಸಿ ಪತ್ರ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದು ಗಮನ ಸೆಳೆದ ಯುವಕ
ವಿಜಯಪುರ: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಅನುನೋದನೆಗೊಂಡ ಹೊಸ 46 ಪಿಯು ಕಾಲೇಜುಗಳನ್ನು ಆರಂಭಿಸಬೇಕೆಂದು ವಿಜಯಪುರ ಜಿಲ್ಲೆಯ ಯುವಕನೋರ್ವ ಸಿಎಂ ಹಾಗೂ ಇತರರಿಗೆ ರಕ್ತದಲ್ಲಿ ಪತ್ರ ಬರೆದು ಇತ್ತೀಚೆಗೆ ಗಮನ ಸೆಳೆದಿದ್ದ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ವಿಜಯರಂಜನ್ ಜೋಷಿ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ನಿರ್ದೇಶಕರು, ಶಾಸಕರಿಗೆ ರಕ್ತದಲ್ಲಿ ಪತ್ರ ಬರೆದು ನೂತನ ಪಿಯು ಕಾಲೇಜು ಆರಂಭಿಸಬೇಕೆಂದು ಮನವಿ ಮಾಡಿ ವಿನೂತನ ಹೋರಾಟ ಮಾಡಿದ್ದ.

2022-23ನೇ ಸಾಲಿನಲ್ಲಿ ರಾಜ್ಯದಲ್ಲಿ 46 ಹೊಸ ಪಿಯು ಕಾಲೇಜುಗಳಿಗೆ ಅನುಮೋದನೆಯನ್ನು ಹಿಂದಿನ ಬಿಜೆಪಿ ಸರ್ಕಾರ ನೀಡಿತ್ತು. ಆದರೆ ಇದೀಗ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರವೇಶಾತಿ ಮುಗಿಯುತ್ತಾ ಬಂದಿದ್ದರೂ ಇನ್ನೂ ಹೊಸ ಪಿಯು ಕಾಲೇಜುಗಳು ಆರಂಭವಾಗಿಲ್ಲ. ಕೂಡಲೇ ಹೊಸ ಪಿಯುಸಿ ಕಾಲೇಜುಗಳನ್ನು ಆರಂಭಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನಕೂಲಕವಾಗುತ್ತದೆ ಎಂದು ರಕ್ತದಲ್ಲಿ ಪತ್ರ ಬರೆದು ವಿಜಯರಂಜನ್ ಜೋಷಿ ಒತ್ತಾಯಿಸಿದ್ದ.
ರಾಜ್ಯದಲ್ಲಿ 46 ಪಿಯುಸಿ ನೂತನ ಕಾಲೇಜುಗಳು ಆರಂಭವಾದರೆ 15 ರಿಂದ 20ಸಾವಿರ ಬಡವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುದ್ದೇಬಿಹಾಳ ಶಾಸಕ ಸಿಎಸ್ ನಾಡಗೌಡ ಹಾಗೂ ಡಿಡಿಪಿಯು ಆಧಿಕಾರಿಗಳಿಗೆ ರಕ್ತದಲ್ಲಿ ಪತ್ರ ಬರೆದು ಆಗ್ರಹಿಸಿದ್ದರು.