
Karnataka BJP President: ಬಿವೈ ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಬಿಜೆಪಿ ಹೈಕಮಾಂಡ್ ಮತ್ತೆ ಮಾಜಿ ಸಿಎಂ ಯಡಿಯೂರಪ್ಪಗೆ ಮಣೆ ಹಾಕಿದಂತಾಗಿದೆ.

ನವದೆಹಲಿ, ನವೆಂಬರ್ 10: ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ (BJP Karnataka President) ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಾಸಕ ವಿಜಯೇಂದ್ರ (BY Vijayendra) ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ (JP Nadda) ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ. ವಿಜಯೇಂದ್ರ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಮುಂಚುಣಿಯಲ್ಲಿ ಕೇಳಿಬಂದಿತ್ತು. ಅಂತಿಮವಾಗಿ ಇದೀಗ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಬಿಜೆಪಿ ಹೈಕಮಾಂಡ್ ಮತ್ತೆ ಮಾಜಿ ಸಿಎಂ ಯಡಿಯೂರಪ್ಪಗೆ ಮಣೆ ಹಾಕಿದಂತಾಗಿದೆ.
