
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ (Rajneesh Goyal) ಅವರು ನೇಮಕಗೊಂಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಸಭೆ ನಡೆಯುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ಸಿಎಸ್ ಆಗಿ ನೇಮಕಗೊಂಡಿದ್ದಾರೆ

ಬೆಂಗಳೂರು, ನ.21: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ (Chief Secretary) ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ (Rajneesh Goyal) ಅವರು ನೇಮಕಗೊಂಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಸಭೆ ನಡೆಯುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ಸಿಎಸ್ ಆಗಿ ನೇಮಕಗೊಂಡಿದ್ದಾರೆ.

ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಮುನ್ನ ಗೋಯಲ್ ಅವರು ತಾಜ್ವೆಸ್ಟ್ ಎಂಡ್ ಹೊಟೇಲ್ನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ನಡೆಯುತ್ತಿದ್ದ ಸಭೆ ನಡುವೆ ಗೋಯಲ್ ಈ ಭೇಟಿ ಮಾಡಿದ್ದರು.