
ಮಂಗಳೂರು ನ 29: ಕಾಂತರಾಜು ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವುದು, ಮತ್ತು ಮುಸ್ಲಿಮರ 2 ಬಿ ಮೀಸಲಿತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಕನಿಷ್ಠ ಪಕ್ಷ ಶೇಕಡಾ ಎಂಟಕ್ಕೆ ಏರಿಸಲು ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯ ಸುವರ್ಣ ಸೌದದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಹಾಗೂ ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ಬೇಟಿಯಾಗಿ ಮನವಿ ಸಲ್ಲಿಸಿದರು , ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಂಜುನಾಥ್ ಭಂಡಾರಿಯವರು ಈ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು


