
ನಾಲ್ಕು ರಾಜ್ಯದ ವಿಧಾನಸಭಾ ಮತಎಣಿಕೆಯಲ್ಲಿ ರೋಚಕ ಫಲಿತಾಂಶ ಹೊರ ಬೀಳುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದ್ದು, ಮ್ಯಾಜಿಕ್ ನಂಬರ್ ತಲುಪುವತ್ತ ಮುನ್ನಡೆ ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸಿಹಿ ಸುದ್ದಿ ಸಿಕ್ರೆ ಮಧ್ಯಪ್ರದೇಶದಲ್ಲಿ ಬಿಜೆಪಿ ತಂತ್ರಗಾರಿಕೆ ಬಿಗ್ ಶಾಕ್ ಕೊಟ್ಟಿದೆ.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸದ್ಯದ ಟ್ರೆಂಡ್ ಪ್ರಕಾರ ಮಧ್ಯಪ್ರದೇಶ 230 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 130 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಮತ್ತೊಮ್ಮೆ ಅಧಿಕಾರಕ್ಕೆ ಬರುವ ಮುನ್ಸೂಚನೆ ನೀಡಿದೆ. ಬಿಜೆಪಿ ಬಹುಮತದತ್ತ ಮುನ್ನುಗ್ಗುತ್ತಿದ್ರೆ ಕಾಂಗ್ರೆಸ್ ಕೂಡ ಆರಂಭದಲ್ಲಿ ಟಫ್ ನೀಡಿತ್ತು. ಆದರೆ ಮ್ಯಾಜಿಕ್ ನಂಬರ್ 100 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ.

ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ತಂತ್ರಗಾರಿಕೆ ಕೈ ಹಿಡಿದಿದೆ. ಚೌಹಾಣ್ ಅವರು ಬುಧ್ನಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. 2020 ರಿಂದ ಮಧ್ಯಪ್ರದೇಶದ ಪ್ರಸ್ತುತ ಮುಖ್ಯಮಂತ್ರಿಯಾಗಿದ್ದಾರೆ. ಬಾಬುಲಾಲ್ ಗೌರ್ ಅವರನ್ನು ಬದಲಿಸಿದ ನಂತರ 2005 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ಡಿಸೆಂಬರ್ 2018 ರವರೆಗೆ ನಿರಂತರವಾಗಿ ಸಿಎಂ ಆಗಿದ್ದರು. ಈಗ ಶಿವರಾಜ್ ಸಿಂಗ್ ಚೌಹಾಣ್ ಅವರು ಮತ್ತೊಮ್ಮೆ ಸಿಎಂ ಆಗೋ ಸಾಧ್ಯತೆ ಇದೆ.
ಮಧ್ಯಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್, , ಬಿಜೆಪಿ ಮಧ್ಯೆ ನೇರಾನೇರ ಪೈಪೋಟಿ ಇದೆ