
ನವದೆಹಲಿ: ಅಧಿವೇಶನ (Session) ನಡೆಯುತ್ತಿರುವಾಗಲೇ ಸಂಸತ್ನಲ್ಲಿ ಭದ್ರತಾ ಲೋಪ ನಡೆದಿದೆ.
ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಒಬ್ಬ ವ್ಯಕ್ತಿ ಮೇಲಿನಿಂದ ಜಿಗಿದಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ.

ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು
ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ ನಡೆದಿದೆ. ಇಬ್ಬರು ಅನಾಮಿಕ ವ್ಯಕ್ತಿಗಳು ಲೋಕಸಭೆ ಗ್ಯಾಲರಿಯಿಂದ ಜಿಗಿದು ಕಲರ್ ಬಾಂಬ್ ಸಿಡಿಸಿದರೆ, ಇಬ್ಬರು ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಈಗ ನಾಲ್ವರನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಸತ್ ಒಳ ಪ್ರವೇಶಕ್ಕೆ ಪಾಸ್ ಇಲ್ಲದೇ ಯಾರನ್ನು ಬಿಡಲ್ಲ. ಹೀಗಿರುವಾಗ ಇಷ್ಟೊಂದು ದೊಡ್ಡ ಮಟ್ಟದ ಭದ್ರತಾ ಲೋಪ ನಡೆದಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.
