Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಬೆಳಗಾವಿ ಸದನದಲ್ಲೂ ಪ್ರತಿಧ್ವನಿಸಿದ ಲೋಕಸಭಾ ಭದ್ರತಾ ಲೋಪ, ಕಾಂಗ್ರೆಸ್ ಎಂಪಿ ಪಾಸ್ ಕೊಟ್ಟಿದ್ರೆ ಏನಾಗ್ತಿತ್ತು?

editor tv by editor tv
December 13, 2023
in ರಾಜ್ಯ
0
ಬೆಳಗಾವಿ ಸದನದಲ್ಲೂ ಪ್ರತಿಧ್ವನಿಸಿದ ಲೋಕಸಭಾ ಭದ್ರತಾ ಲೋಪ, ಕಾಂಗ್ರೆಸ್ ಎಂಪಿ ಪಾಸ್ ಕೊಟ್ಟಿದ್ರೆ ಏನಾಗ್ತಿತ್ತು?
1.9k
VIEWS
Share on FacebookShare on TwitterShare on Whatsapp

ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಪ ಪ್ರಕರಣ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಪ್ರತಿಧ್ವನಿಸಿದ್ದು, ಈ ವಿಷಯ ಆಡಳಿ ಹಾಗೂ ವಿಪಕ್ಷ ನಾಯಕರ ಗದ್ದಲಕ್ಕೆ ಕಾರಣವಾಗಿದೆ. ಹಾಗಾದ್ರೆ, ಯಾರೆಲ್ಲ ಏನೇನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಬೆಳಗಾವಿ, (ಡಿಸೆಂಬರ್ 13): ಸಂಸತ್​ ಕಲಾಪದಲ್ಲಿ ಭದ್ರತಾ ಲೋಪ ಪ್ರಕರಣ(Security Breach in Lok Sabha) ಇತ್ತ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೂ (Belagavi Winter Session) ಪ್ರತಿಧ್ವನಿಸಿದ್ದು,  ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಮಧ್ಯೆ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಮೊದಲಿಗೆ ಸುವರ್ಣ ಸೌಧದಲ್ಲಿ ಈ ವಿಷಯವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಅವರು ಪ್ರಸ್ತಾಪ ಮಾಡಿದ್ದು, ಸಂಸದ ಪ್ರತಾಪ್‌ ಸಿಂಹ (Pratap Simha) ಅವರು ಕೊಟ್ಟ ಪಾಸ್‌ನಿಂದಲೇ ಈ ರೀತಿಯಾಗಿದೆ. ಹೀಗಾಗಿ ಅವರಿಗೆ ಸ್ವಲ್ಪ ಬುದ್ಧಿವಾದ ಹೇಳಿ ಎಂದಿದ್ದಾರೆ. ಈ ರೀತಿ ಹೇಳುತ್ತಿದ್ದಂತೆಯೇ ಇತ್ತ ವಿಪಕ್ಷ ನಾಯಕ ಆರ್ ಅಶೋಕ್ (Opposition leader R Ashok) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನೀವು ಹೀಗೆಲ್ಲ ಮಾತನಾಡಬೇಡಿ. ಇದು ದೇಶದ ಭದ್ರತೆಯ ವಿಷಯವಾಗಿದೆ ಎಂದು ಕಿಡಿಕಾರಿದರು.

ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿರುವಾಗ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಸಂಸದ ಪ್ರತಾಪ್‌ ಸಿಂಹ ಅವರಿಗೆ ಬಿಜೆಪಿಯವರು ಸ್ವಲ್ಪ ಬುದ್ಧಿ ಹೇಳಬೇಕು. ಹೀಗೆ ಎಲ್ಲರಿಗೂ ಪಾಸ್‌ ಕೊಟ್ಟರೆ ಹೇಗೆ? ಅದು ಕಾಂಗ್ರೆಸ್‌ನವರು ಯಾರಾದರೂ ಪಾಸ್‌ ಕೊಟ್ಟಿದ್ದರೆ ನೀವು ಸುಮ್ಮನೆ ಇರುತ್ತಿದ್ದಿರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಇದಕ್ಕೆ ಮಧ್ಯ ಪ್ರವೇಶ ಮಾಡಿದ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಇದು ದೇಶದ ಭದ್ರತೆಯ ಪ್ರಶ್ನೆಯಾಗಿದೆ. ಈ ವಿಷಯವನ್ನು ನೀವು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ. ಕೇಂದ್ರ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಮಾತನಾಡಿ, ಇದು ದೇಶದ ಭದ್ರತೆಗೆ ಸಂಬಂಧಪಟ್ಟ ವಿಷಯವಾಗಿದ್ದು, ಇದನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಆದರೆ, ಇಂಥ ವಿಚಾರವನ್ನು ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು. ಆಗ ಡಿ.ಕೆ. ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಅದೇ ನಾವು ಕಾಂಗ್ರೆಸ್‌ನವರು ಪಾಸ್‌ ಕೊಟ್ಟಿದ್ದರೆ ನೀವು ಸುಮ್ಮನಿರುತ್ತಿದ್ದಿರಾ? ಎಂದು ಪ್ರಶ್ನಿಸಿದ್ದಾರೆ.

ಬೇರೆ ಪಕ್ಷದ ಎಂಪಿ ಪಾಸ್ ಕೊಟ್ಟಿದ್ದರೆ ಬಿಜೆಪಿಯವರು ಏನು ಮಾಡ್ತಿದ್ದರು ಎಂದು ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ಪ್ರಶ್ನಿಸಿದ್ದಾರೆ. ಅಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಹ ಇದೇ ರೀತಿಯಾಗಿ ಪ್ರಶ್ನಿಸಿದ್ದು, ಪಾಸ್ ಕೊಟ್ಟ ಸಂಸದರಿಗೆ ಜವಾಬ್ದಾರಿ ಇಲ್ವಾ ಎಂದರು. ಈ ವೇಳೆ ಆಡಳಿತ, ವಿಪಕ್ಷ ಸದಸ್ಯರ ನಡುವೆ ಮಾತಿನ‌ ಚಕಮಕಿ ನಡೆಯಿತು.

Previous Post

ಸಮಾಜ ಸೇವೆಗೆ ಹೆಸರಾಗಿದ್ದ ಕಾಪುವಿನ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

Next Post

ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

Next Post
ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.