Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಭದ್ರತಾ ಲೋಪ ವಿರುದ್ಧ ಪ್ರತಿಭಟನೆ , 49 ಸಂಸದರ ಅಮಾನತು – ಇಲ್ಲಿಯವರೆಗೆ 149 ಮಂದಿ ಸಸ್ಪೆಂಡ್‌

editor tv by editor tv
December 19, 2023
in ರಾಷ್ಟ್ರೀಯ
0
ಭದ್ರತಾ ಲೋಪ ವಿರುದ್ಧ ಪ್ರತಿಭಟನೆ , 49 ಸಂಸದರ ಅಮಾನತು – ಇಲ್ಲಿಯವರೆಗೆ 149 ಮಂದಿ ಸಸ್ಪೆಂಡ್‌
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಡಿ. 13ರಂದು ಸಂಸತ್‌ ಭವನದಲ್ಲಿ ಸಂಭವಿಸಿದ್ದ ಭದ್ರತಾ ಲೋಪ (Parliament Security Breach) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರ ಉತ್ತರಕ್ಕೆ ಒತ್ತಾಯಿಸಿ, ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ವಿಪಕ್ಷಗಳ 49 ಸದಸ್ಯರನ್ನ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಇಂದು) ಅಮಾನತುಗೊಳಿಸಿದ್ದಾರೆ.

ಈ ಮೂಲಕ ಚಳಿಗಾಲದ ಅಧಿವೇಶನದಲ್ಲಿ ಒಟ್ಟು ಅಮಾನತುಗೊಂಡ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಸೋಮವಾರ ಕಲಾಪ ಮುಗಿಯುವವರೆಗೆ ರಾಜ್ಯಸಭೆ ಮತ್ತು ಲೋಕಸಭೆಯಿಂದ ಒಟ್ಟು 92 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಮಂಗಳವಾರ ಅಮಾನತು ಆದವರಲ್ಲಿ ನ್ಯಾಷನಲ್ ಕಾನ್ಸರೆನ್ಸ್ ಫಾರೂಕ್ ಅಬ್ದುಲ್ಲಾ ಹಾಗೂ ಕಾಂಗ್ರೆಸ್ ಮುಖಂಡರಾದ (Congress Leaders) ಶಶಿ ತರೂರ್, ಮನೀಶ್ ತಿವಾರಿ ಅವರೂ ಸೇರಿದ್ದಾರೆ.

ಲೋಕಸಭೆಯಲ್ಲಿನ ಭದ್ರತಾ ಲೋಪಕ್ಕೆ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡುವಂತೆ ವಿರೋಧ ಪಕ್ಷಗಳ INDIA ಒಕ್ಕೂಟದ ಸದಸ್ಯರು ಕಳೆದ ಕೆಲ ದಿನಗಳಿಂದ ತೀವ್ರ ಒತ್ತಡ ಹೇರುತ್ತಿದ್ದಾರೆ. ಫಲಕ ಹಿಡಿದು ಮತ್ತು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಶಿಸ್ತಿನ ವರ್ತನೆಗಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಿಂದ ಒಟ್ಟು 141 ಸದಸ್ಯರನ್ನು ಅಮಾನತುಗೊಳಿಸಿದ್ದು, ಇತಿಹಾಸವಾಗಿದೆ.

ಸಂಸತ್‌ ಭದ್ರತಾ ಲೋಪ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪಟ್ಟು ಹಿಡಿದು ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ 79 ಸದಸ್ಯರನ್ನು ಸೋಮವಾರ ಅಮಾನತು ಮಾಡಲಾಗಿತ್ತು. ಈ ಪೈಕಿ 11 ಸದಸ್ಯರ ನಡವಳಿಕೆ ಪ್ರಕರಣವನ್ನು ಸದನದ ಹಕ್ಕುಬಾಧ್ಯತಾ ಸಮಿತಿಗೆ ನೀಡಲಾಗಿದ್ದು, ಆ ವರದಿ ಬರುವವರೆಗೆ ಸದನದಿಂದ ದೂರ ಉಳಿಯುವಂತೆ ಸೂಚಿಸಲಾಗಿದೆ.

ಅತಿಹೆಚ್ಚು ಸಂಸದರ ಅಮಾನತು:
ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸಂಸದರನ್ನು ಈ ಬಾರಿ ಅಮಾನತು ಮಾಡಲಾಗಿದೆ. 1989 ರಲ್ಲಿ ಅತಿ ಹೆಚ್ಚು ಸಂಸದರು ಅಮಾನತಾಗಿದ್ದರು. ಅದು ಇದವರೆಗಿನ ದಾಖಲೆಯಾಗಿತ್ತು. ಆ ದಾಖಲೆಯೂ ಬ್ರೇಕ್‌ ಆಗಿದೆ. ಹಾಗಾದರೆ ಯಾವ್ಯಾವ ಅವಧಿಯಲ್ಲಿ ಎಷ್ಟು ಸಂಸದರ ಅಮಾನತಾಗಿತ್ತು ಎಂಬ ವಿವರ ಇಲ್ಲಿದೆ.

2023ರಲ್ಲಿ 92 ಸಂಸದರು ಅಮಾನತು
ಡಿಸೆಂಬರ್ 13 ರಂದು ಉಂಟಾದ ಭದ್ರತಾ ಲೋಪ ವಿಚಾರವಾಗಿ ಆಡಳಿತ ಪಕ್ಷ ವಿಪಕ್ಷಗಳ‌ ನಡುವೆ ಗದ್ದಲ ನಡೆಯುತ್ತಿದೆ. ಪ್ರತಾಪ್ ಸಿಂಹ ವಿರುದ್ಧ ಕ್ರಮ ಹಾಗೂ ಸದನದಲ್ಲಿ ಅಮಿತ್ ಶಾ ಉತ್ತರ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಡಿಸೆಂಬರ್ 14 ರಂದು ರಾಜ್ಯಸಭೆಯಲ್ಲಿ ಓರ್ವ ಸಂಸದ ಹಾಗೂ ಲೋಕಸಭೆಯಲ್ಲಿ 13 ಸಂಸದರನ್ನ ಅಮಾನತು ಮಾಡಲಾಗಿತ್ತು. ಸೋಮವಾರ 79 ಸಂಸದರನ್ನು ಅಮಾನುಗೊಳಿಸಲಾಗಿತ್ತು. ಮಂಗಳವಾರವಾದ ಇಂದು 49 ಸಂಸದರನ್ನ ಅಮಾನತು ಮಾಡಲಾಗಿದೆ.

1989 – 63 ಸಂಸದರು ಅಮಾನತು
1989 ರಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ 63 ಸಂಸದರನ್ನ ಅಮಾನತುಗೊಳಿಸಲಾಗಿತ್ತು. ಮಾರ್ಚ್ 15, 1989 ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ಕುರಿತು ತನಿಖೆ ನಡೆಸಿದ್ದ ಠಕ್ಕರ್ ಆಯೋಗದಿಂದ ವರದಿ ಮಂಡನೆ ಮಾಡಲಾಗುತ್ತಿತ್ತು. ಈ ವೇಳೆ ವಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಕಾರಣ 63 ಸಂಸದರನ್ನು ಅಮಾನತು ಮಾಡಲಾಗಿತ್ತು.

2019 – 45 ಸಂಸದರು ಅಮಾನತು
2019 ರಲ್ಲಿ 45 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಎರಡು ದಿನದ ಅವಧಿಯಲ್ಲಿ 45 ಸಂಸದರು ಅಮಾನತುಗೊಂಡಿದ್ದರು. ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಅಂದಿನ ಸ್ಪೀಕರ್ ಸುಮಿತ್ರಾ ಮಹಾಜನ್, ಟಿಡಿಪಿ ಮತ್ತು ಎಐಎಡಿಎಂಕೆಯ 45 ಸಂಸದರನ್ನ ಅಮಾನತು ಮಾಡಿದ್ದರು.

2015- 25 ಸಂಸದರ ಅಮಾನತು
ಕಲಾಪ ನಡೆಯುವ ವೇಳೆ ಪ್ರತಿಭಟನೆ ನಡೆಸಿದ್ದಕ್ಕೆ ಹಾಗೂ ಭಿತ್ತಿಪತ್ರ ತೋರಿ, ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 25 ಸಂಸದರನ್ನ ಲೋಕಸಭೆಯಲ್ಲಿ ಅಮಾನತುಗೊಳಿಸಲಾಗಿತ್ತು.

2014- 18 ಸಂಸದರ ಅಮಾನತು
2014ರಲ್ಲಿ ತೆಲಂಗಾಣ ರಾಜ್ಯ ಆಂಧ್ರಪ್ರದೇಶದಿಂದ ಬೇರ್ಪಟ್ಟು ನೂತನ ರಾಜ್ಯವಾಗಿತ್ತು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ಸಂಸದರು, ತೆಲಂಗಾಣ ವಿಚಾರವಾಗಿ ಕಲಾಪದಲ್ಲಿ ಗದ್ದಲ ಸೃಷ್ಟಿ ಮಾಡಿದ್ದರು. ಈ ಹಿನ್ನೆಲೆ ಸ್ಪೀಕರ್ ಸುಮಿತ್ರಾ ಮಹಾಜನ್ 18 ಸಂಸದರನ್ನು ಅಮಾನತುಗೊಳಿಸಿದ್ದರು.

Previous Post

IPL Auction ಆರಂಭ: ದಾಖಲೆ ಮೊತ್ತಕ್ಕೆ ಹೈದರಾಬಾದ್ ಪಾಲಾದ ಪ್ಯಾಟ್ ಕಮಿನ್ಸ್

Next Post

IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್‌ ಸ್ಟಾರ್ಕ್‌

Next Post
IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್‌ ಸ್ಟಾರ್ಕ್‌

IPL ಇತಿಹಾಸದಲ್ಲೇ ದಾಖಲೆ – ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾದ ಮಿಚೆಲ್‌ ಸ್ಟಾರ್ಕ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.