
ಮೈಸೂರು: ಹಿಜಬ್ ನಿಷೇಧ ಆದೇಶ ವಾಪಸ್ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಎದ್ದಿದೆ.
ಈ ಸಂಬಂಧ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಿಜಬ್ ನಿಷೇಧ (Hijab Ban Withdraw) ಆದೇಶಕ್ಕೆ ಇನ್ನೂ ತೀರ್ಮಾನಿಸಿಲ್ಲ. ಯಾರೋ ಪ್ರಶ್ನೆ ಕೇಳಿದ್ರು. ಆಗ ಆದೇಶ ವಾಪಸ್ಸಿಗೆ ಯೋಚನೆ ಮಾಡ್ತಿದ್ದೀವಿ ಅಂತಷ್ಟೇ ಹೇಳಿದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸ್ತೀವಿ ಎಂದು ಹೇಳಿದ್ದಾರೆ.

ಈ ಮೂಲಕ ಭಾರೀ ವಿವಾದದ ಬಳಿಕ ಸಿಎಂ ಎಚ್ಚೆತ್ತುಕೊಂಡು ಇಂದು ಹೇಳಿಕೆ ಬದಲಿದ್ರಾ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಬಳಿಕ ಹಿಜಬ್ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳುವ ಮೂಲಕ ಸಿಎಂ ಮತ್ತೊಂದು ವಿವಾದದಲ್ಲಿ ಸಿಲುಕಿದ್ರಾ ಅನ್ನೋ ಅನುಮಾನವೂ ಮೂಡಿದೆ
ಶುಕ್ರವಾರ ಸಿಎಂ ಹೇಳಿದ್ದೇನು..?: ನಿನ್ನೆ ಮೈಸೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಹಿಜಬ್ ನಿಷೇಧಿಸಿತ್ತು. ಅದನ್ನು ವಾಪಸ್ ಪಡೆಯಲಾಗುವುದು. ಹಿಜಬ್ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ ಎಂದು ಹೇಳಿದ್ದರು.

ಉಡುಪು ಅವರವರ ಇಷ್ಟ. ಹಿಜಬ್ ನಿಷೇಧ ವಾಪಸ್‌ಗೆ ಹೇಳಿದ್ದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಹಿಜಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ಹೇಳಿದ್ದರು.