
ಬೆಂಗಳೂರು: ರೂಪಾಂತರಿತ ಕೊರೋನಾ ದ ಎರಡನೇ ಅಲೆ ಆರಂಭಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ 9 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯು ಜಾರಿಗೊಳಿಸಲಾಗಿದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ರಾತ್ರಿ 10 ಗಂಟೆಯ ನಂತರ ವಾಹನ ಸಂಚಾರ ಸಹಿತ ಎಲ್ಲವನ್ನೂ ನಿರ್ಬಂಧಿಸಲಾಗಿದೆ. ಆದರೆ ತುರ್ತು ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ಒದಗಿಸಲಾಗಿದೆ.