
ಕಲಬುರಗಿ ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ.

ಕಲಬುರಗಿ, ಜನವರಿ 23: ನಗರದಲ್ಲಿ ಕೋಟನೂರ ಡಿ ಬಳಿ ಅಂಬೇಡ್ಕರ್ ಪ್ರತಿಮೆ ಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ವಿಧಾನಪರಿಷತ್ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಜಗತ್ ಸರ್ಕಲ್ ಬಳಿ ಗೂಡ್ಸ್ ವಾಹನದ ಮೇಲೆ, ಗೂಡ್ಸ್ ವಾಹನಕ್ಕೆ ಕಲ್ಲುತೂರಾಟ ಮಾಡಲಾಗಿದೆ. ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್
ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮಾತನಾಡಿ, ಪ್ರತಿಮೆಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿಬೇಕು. ಪ್ರತಿಮೆಗೆ ಅಪಮಾನ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದಾರೆ.
