
ಕೆಲ ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದಾರೆ. ಈ ಹಿನ್ನೆಲೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಮುಸ್ಲಿಂ ಮುಖಂಡರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ

ರಾಯಚೂರು, ಜ.31: ಟಿಪ್ಪು ಸುಲ್ತಾನ್ (Tipu Sultan) ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಹಿನ್ನೆಲೆ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಘಟನೆ ಖಂಡಿಸಿ ಮುಸ್ಲಿಂ ಮುಖಂಡರು ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ರಸ್ತೆ ತಡೆದು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದು ಮುಸ್ಲಿಮರ ಕಣ್ಣಿಗೆ ಬಿದ್ದಿದ್ದು ಇದರಿಂದ ತಮ್ಮ ಮನಸ್ಸಿಗೆ ನೋವಾಗಿ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಸದ್ಯ ಸಿರವಾರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಕುಳಿತು ಸಂಚಾರಕ್ಕೆ ಬಂದ್ ಮಾಡಿ ರಸ್ತೆ ಮಧ್ಯೆ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಸ್ಥಳದಲ್ಲಿ ನಿರ್ಮಾಣವಾಗಿರುವ ಸದ್ಯದ ಪರಿಸ್ಥಿತಿಯನ್ನು ಗಮನಿಸಿ ಸ್ಥಳದಲ್ಲಿ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆಯಾಗಿದೆ. ಟಿಪ್ಪು ಸುಲ್ತಾನ್ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳ ಪತ್ತೆಗೆ ಸ್ಥಳೀಯ ಸಿಸಿ ಟಿವಿ ಫೂಟೇಜ್‌ಗಳ ಪರಿಶೀಲನೆ ಸೇರಿದಂತೆ ಅಗತ್ಯ ತನಿಖಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.