
ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶನಿವಾರ (ಫೆ.10) ಬೆಳಗ್ಗೆ 6.30ಕ್ಕೆ ಏಕಕಾಲಕ್ಕೆ ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ, ಫೆಬ್ರವರಿ 10: ಆದಾಯ ಮೀರಿ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ನಾರ ಭರತ್ ರೆಡ್ಡಿ (MLA Nara Bharath Reddy) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ 20 ಅಧಿಕಾರಿಗಳ ನಾಲ್ಕು ತಂಡ ಇಂದು (ಫೆ.10) ಬೆಳಗ್ಗೆ 6.30ಕ್ಕೆ ಏಕಕಾಲಕ್ಕೆ ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾವೆ. ಶಾಸಕ ನಾರಾಭರತ್ ರೆಡ್ಡಿ ಕುಟುಂಬ ಗ್ರಾನೈಟ್ ಬಿಸಿನೆಸ್ ಮಾಡುತ್ತಿದೆ

