
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ ಮಾಡಲಾಗಿದೆ. ಶನಿವಾರ ರಾತ್ರಿ 9:30 ಸುಮಾರಿಗೆ ಫೈರಿಂಗ್ ಶಬ್ದ ಕೇಳಿ ಬಂದಿತ್ತು. ಪಟಾಕಿಯ ಶಬ್ದವೆಂದು ಸುಮ್ಮನಾದೆವು. ಕೃಷ್ಣ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದನು ಎಂದು ನೆರೆಹೊರೆಯವರು ಮಾಹಿತಿ ನೀಡಿದ್ದಾರೆ.

ಉಡುಪಿ, ಮಾರ್ಚ್ 03: ಬ್ರಹ್ಮಾವರ (Brahmavar) ತಾಲೂಕಿನ ಹನೆಹಳ್ಳಿಯಲ್ಲಿ ಗುಂಡಿಕ್ಕಿ (Firing) ಯುವಕನ ಕೊಲೆ ಮಾಡಲಾಗಿದೆ. ಕೃಷ್ಣ (36) ಮೃತ ಯುವಕ. ಶನಿವಾರ (ಮಾ.02) ರ ರಾತ್ರಿ ಘಟನೆ ನಡೆದಿದೆ. ಶನಿವಾರ ರಾತ್ರಿ 9:30 ಸುಮಾರಿಗೆ ಫೈರಿಂಗ್ ಶಬ್ದ ಕೇಳಿ ಬಂದಿತ್ತು. ಪಟಾಕಿಯ ಶಬ್ದವೆಂದು ಸುಮ್ಮನಾದೆವು. ಕೃಷ್ಣ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದನು ಎಂದು ನೆರೆಹೊರೆಯವರು ಮಾಹಿತಿ ನೀಡಿದ್ದಾರೆ. ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಶನಿವಾರ ರಾತ್ರಿ ಊಟ ಮಾಡುತ್ತಿರುವ ವೇಳೆ ಶೂಟೌಟ್ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ ನೀಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

