
ಮಂಗಳೂರು, ಮಾ 3: ಪಣಂಬೂರು ಇಲ್ಲಿನ ಕಡಲ ತೀರಕ್ಕೆ ವಿಹಾರಕ್ಕೆಂದು ಬಂದಿದ್ದ ಮೂವರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ರವಿವಾರ ಸಂಜೆ ವರದಿಯಾಗಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್ವೈಸರ್ ಆಗಿದ್ದ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವರು ರವಿವಾರ ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.
