
ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಔಟ್
ಕಾಂಗ್ರೆಸ್ಸಿನ 39 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಕೆಸಿ ವೇಣುಗೋಪಾಲ
ಮೊದಲ ಪಟ್ಟಿಯಲ್ಲಿ ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಫೈನಲ್!
ನವದೆಹಲಿ: ಲೋಕಸಭಾ ಚುನಾವಣೆಗೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ವರಿಷ್ಠೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆಯಲ್ಲಿ ಕರ್ನಾಟಕ, ಕೇರಳ ಮತ್ತು ಛತ್ತೀಸ್ಗಡ ಸೇರಿ ಹಲವು ರಾಜ್ಯಗಳ 39 ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದೆ.

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ 39 ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದೇವೆ. ಈ ಪೈಕಿ 15 ಮಂದಿ ಜನರಲ್ ಮತ್ತು 24 ಮಂದಿ ಎಸ್ಸಿ, ಎಸ್ಟಿ ಮತ್ತು ಮೈನಾರಿಟಿಗೆ ಟಿಕೆಟ್ ನೀಡಲಾಗಿದೆ ಎಂದರು.
ಮೊದಲ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?: ರಾಹುಲ್ ಗಾಂಧಿ (ವಯನಾಡ್, ಕೇರಳ), ಭೂಪೇಶ್ ಬಘೇಲ್ (ರಾಜನಂದಗಾಂವ್, ಛತ್ತೀಸ್‌ಗಢ), ತಾಮ್ರಧ್ವಜ್ ಸಾಹು (ಮಹಾಸಮುಂಡ್, ಛತ್ತೀಸ್‌ಗಢ), ಶಶಿ ತರೂರ್ (ತಿರುವನಂತಪುರ, ಕೇರಳ), ಹೈಬಿ ಈಡನ್ (ಎರ್ನಾಕುಲಂ, ಕೇರಳ), ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ, ಕರ್ನಾಟಕ)ದಿಂದ ಸ್ಪರ್ಧಿಸಲಿದ್ದಾರೆ.
ಕರ್ನಾಟಕದ ಲಿಸ್ಟ್ ಹೀಗಿದೆ..!
ಹಾವೇರಿ – ಆನಂದಸ್ವಾಮಿ ಗಡ್ಡದೇವ್ರು ಮಠ
ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
ವಿಜಯಪುರ – ರಾಜು ಆಲಗೂರು – ಎಸ್.ಸಿ
ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ – ಒಕ್ಕಲಿಗ

ಗುರುವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ಸಭೆ ನಡೆದಿತ್ತು. ಈ ಸಭೆಯಲ್ಲಿ 60 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಇಂದು (ಶುಕ್ರವಾರ) ಸಂಜೆ 7 ಗಂಟೆಗೆ ದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಅಜಯ್ ಮಾಕೇನ್ ಹಾಗೂ ಕೆ.ಸಿ ವೇಣುಗೋಪಾಲ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು
