
ಮೈಸೂರು: ನಗರ ಪಾಲಿಕೆ ಮಾಜಿ ಸದಸ್ಯನ ಸಹೋದರನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಹತ್ಯೆಯಾದ ವ್ಯಕ್ತಯನ್ನು ಪಾಲಿಕೆ ಮಾಜಿ ಸದಸ್ಯ ಆಯಾಜ್ ಪಂಡು ಸಹೋದರ ಮೌಲಾನ ಅಕ್ಮಲ್ ಎಂದು ಗುರುತಿಸಲಾಗಿದೆ.ಶುಕ್ರವಾರ ತಡರಾತ್ರಿ ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತ ಸಮೀಪ ಐದಕ್ಕೂ ಹೆಚ್ಚು ಮಂದಿಯ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ.ಅಕ್ಮಲ್ ರವರು ಎಸ್ಡಿಪಿಐನಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದ್ದು, ಬೆಂಗಳೂರು ಮೂಲದ ವ್ಯಕ್ತಿಗಳಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
