
ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿರುವ ಸಂಸದ ಅನಂತ್ ಕುಮಾರ್ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು ಅಂತ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಹೆಗಡೆಯ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ ಅಂತಲೂ ಸವಾಲು ಹಾಕಿದ್ದಾರೆ. ಸಂವಿಧಾನದ ವಿರುದ್ಧ ಅನಂತ್ ಕುಮಾರ್ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಈ ರೀತಿ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ.

ಇದನ್ನ ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು ಅಂತ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.



ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು. ಸಂವಿಧಾನ ತಿದ್ದುಪಡಿಗೆ ಮೆಜಾರಿಟಿ ಬೇಕಾಗುತ್ತದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮೆಜಾರಿಟಿ ಇರಬೇಕು. 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು. 400 ಕ್ಕೂ ಹೆಚ್ಚು ಲೋಕಸಭೆ ಗೆದ್ದರೆ 20 ಕ್ಕೂ ಹೆಚ್ಚು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2/3 ಮೆಜಾರಿಟಿ ಬಂದ ನಂತರ ಮಾರಿಜಾತ್ರೆ ನೋಡಿ. ಒಂದೊಂದು ಸೀಟು ಚುನಾವಣೆಯಲ್ಲಿ ಇಂಪಾರ್ಟೆಂಟ್ ಎಂದಿದ್ದಾರೆ.