
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ 7ನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದು, ಪದಗ್ರಹಣ ಸಮಾರಂಭ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ನೆರವೇರಿತು.
ಮುಖ್ಯ ಅತಿಥಿಯಾಗಿದ್ದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಸಹಕಾರಿ ಕ್ಷೇತ್ರದ ಮೂಲಕ ರಾಷ್ಟ್ರ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ ತರುವ ಕೆಲಸ ಡಾ.ಎಂ.ಎನ್ .ರಾಜೇಂದ್ರ ಕುಮಾರ್ ಅವರ ಮೂಲಕ ಆಗಿದೆ ಎಂದು ಕರ್ನಾಟಕ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಶುಭ ಹಾರೈಸಿದರು.

ಡಾ| ರಾಜೇಂದ್ರ ಕುಮಾರ್ ಮಾತ ನಾಡಿ, ಎಲ್ಲರ ಸಹಕಾರವಿದ್ದರೆ ಸಂಸ್ಥೆ ಯೊಂದು ಅಭೂತ ಪೂರ್ವ ಬೆಳವಣಿಗೆ ಸಾಧಿ ಸಬಹುದು ಎಂಬುದಕ್ಕೆ ನಮ್ಮ ಬ್ಯಾಂಕ್ ಸಾಕ್ಷಿ . ಸಹಕಾರ ಕ್ಷೇತ್ರದಲ್ಲಿ ರಾಜಕಾರಣ ಮಾಡದೆ ರೈತರ ಬಗ್ಗೆ ಕಾಳಜಿಯಿಂದ ಕೆಲಸ ಮಾಡುತ್ತಿದ್ದೇವೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಸದೃಢವಾಗಿದ್ದು, ಶೂನ್ಯ ಬಡ್ಡಿ ದರದ ಸಾಲ ಸಹಿತ ರೈತರ ಪರವಾದ ಎಲ್ಲ ಯೋಜನೆಗಳನ್ನು ಎಸ್ಸಿಡಿಸಿಸಿ ಬ್ಯಾಂಕ್ ಸಮರ್ಪಕವಾಗಿ ಜಾರಿಗೊಳಿಸುತ್ತಿದೆ. ಅವಿಭಜಿತ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಇನ್ನಷ್ಟು ಬೆಳೆಯಬೇಕು. ಆ ಮೂಲಕ ರಾಷ್ಟ್ರದಲ್ಲೇ ದಾಖಲೆ ಆಗಲಿ ಎಂದರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಶುಭ ಹಾರೈಸಿದರು. ಜಾಗತಿಕ ಬಂಟರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ರಾಜೇಂದ್ರ ಕುಮಾರ್ ಅವರ ನೆರವಿನಿಂದ ಬಂಟರು ಸೇರಿದಂತೆ ಎಲ್ಲಾ ಸಮುದಾಯದ ಬೆಳವಣಿಗೆಗೆ ಸಹಾಯ ವಾಗಿದೆ ಎಂದರು.

ಸಮಾರಂಭದಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ವಿನಯ ಕುಮಾರ್ ಸೂರಿಂಜೆ, ಭಾಸ್ಕರ ಎಸ್. ಕೋಟ್ಯಾನ್, ಕೆ. ಹರಿಶ್ಚಂದ್ರ, ಟಿ.ಜಿ. ರಾಜರಾಮ ಭಟ್ ,ದೇವಿ ಪ್ರಸಾದ್ ಶೆಟ್ಟಿ, ಬಿ. ಅಶೋಕ್ ಕುಮಾರ್ ಶೆಟ್ಟಿ, ಶಶಿಕುಮಾರ್ ರೈ.ಬಿ., ಎಸ್. ರಾಜು ಪೂಜಾರಿ, ಎಂ.ವಾದಿರಾಜ ಶೆಟ್ಟಿ, ಕುಶಾಲಪ್ಪ ಗೌಡ,ಎಸ್.ಎನ್. ಮನ್ಮಥ, ತಾಲೂಕು ಕೃಷಿ ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ ,ಎಸ್.ಬಿ. ಜಯರಾಮ ರೈ ದ.ಕ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಚರಿತ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.
