
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಡಾ. ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್, ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.
ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳೋದು ಸಮಂಜಸ ಅಲ್ಲ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಅಂತ ಎನ್ನಲ್ಲ ಎಂದಿದ್ದಾರೆ.

ದೇವೇಗೌಡರ ಕುಟುಂಬದ ಭಾಗ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡರ ಪಾರ್ಟಿ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನ ಸೋಲಿಸೋಕೆ ವಿರೋಧಿಗಳೆಲ್ಲ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ ಎಂದರು.
