
ಬೆಂಗಳೂರು: ಚಿನ್ನದ ಮಳಿಗೆ (Gold Shop) ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ದೇವಿನಗರದಲ್ಲಿ (Devinagar) ನಡೆದಿದೆ.
ಎರಡು ಬೈಕ್ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ (Bengaluru Shoot Out) ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ಅಪ್ಪುರಾಮ್ ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಲ್ಲದೇ ಅಂತರಾಮ್ ಎಂಬವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿದೆ.

ಚಿನ್ನದಂಗಡಿಗೆ ಬಂದಿದ್ದ ದುಷ್ಕರ್ಮಿಗಳು ಗಲಾಟೆ ಮಾಡಿದ್ದಾರೆ. ಈ ವೇಳೆ ಗಲಾಟೆಗೆ ಅಂತರಾಮ್ ಅವರು ವಿರೋಧ ವ್ಯಕ್ತಪಡಿಸಿದಾಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಅಂಗಡಿ ಹೊರಗಿಂದ ಓರ್ವ ಹಾಗೂ ಅಂಗಡಿ ಒಳಗೆ ಓರ್ವ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಿಷನರ್ ದಯಾನಂದ್, 11 ಗಂಟೆ ವೇಳೆಗೆ ನಾಲ್ವರು ಆರೋಪಿಗಳು ಎಂಟ್ರಿ ಕೊಟ್ಟಿದ್ದಾರೆ. ಅವರನ್ನು ನೋಡಿದ್ರೆ ರಾಬರಿಗೆ ಬಂದ ಹಾಗೇ ಇದೆ. ಇಬ್ಬರ ಮೇಲೆ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ

ಘಟನಾ ಸ್ಥಳಕ್ಕೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan ), ಕಮಿಷನರ್ ದಯಾನಂದ್ ಹಾಗೂ ಕೋಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
