
ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಸಿಎಎ ಕಾನೂನನ್ನು ಪ್ರಶ್ನಿಸಿ 237 ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಏಪ್ರಿಲ್ 8 ರವರೆಗೆ ಅಂದರೆ ಮೂರು ವಾರಗಳ ಕಾಲಾವಕಾಶವನ್ನು ನ್ಯಾಯಾಲಯ ನೀಡಿದೆ.

ದೆಹಲಿ ಮಾರ್ಚ್ 19: ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ (Supreme Court) ಮಂಗಳವಾರ ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ (Lok Sabha election) ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಕಾನೂನನ್ನು ಪ್ರಶ್ನಿಸಿ 237 ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಏಪ್ರಿಲ್ 8 ರವರೆಗೆ ಅಂದರೆ ಮೂರು ವಾರಗಳ ಕಾಲಾವಕಾಶವನ್ನು ಸುಪ್ರೀಂ ನೀಡಿದೆ

ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ವಿಚಾರಣೆ ನಡೆಸಿದರು. ಅರ್ಜಿದಾರರಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಕೇರಳ ಮೂಲದ ರಾಜಕೀಯ ಪಕ್ಷ) ಮತ್ತು ವಿರೋಧ ಪಕ್ಷದ ನಾಯಕರಾದ ಕಾಂಗ್ರೆಸ್‌ನ ಜೈರಾಮ್ ರಮೇಶ್ ಮತ್ತು ತೃಣಮೂಲದ ಮಹುವಾ ಮೊಯಿತ್ರಾ ಕೂಡ ಸೇರಿದ್ದಾರೆ