
ಬೆಂಗಳೂರು: ಮೆಟ್ರೋ ಸಿಬ್ಬಂದಿಯೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಜಾಲಹಳ್ಳಿ ಮೆಟ್ರೋ ಸ್ಟೇಷನ್ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮುಂದೆ ಖಾಸಗಿ ಅಂಗ ಸ್ಪರ್ಶ ಮಾಡಿಕೊಂಡು ದುರ್ವರ್ತನೆ ತೋರಿದ್ದಾನೆ. ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್ನಲ್ಲಿ ಸಿಬ್ಬಂದಿ ಅಸಭ್ಯ ವರ್ತನೆ ತೋರಿದ್ದಾನೆ. ಈ ಘಟನೆ ಕುರಿತು ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆ ದೂರು ನೀಡಿದ್ದಾರೆ. ದೂರು ನೀಡಿದರೂ ಮೇಲಾಧಿಕಾರಿಗಳಿಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಸದ್ಯ ಮೆಟ್ರೋ ಫ್ಲಾಟ್ಫಾರ್ಮ್ನಲ್ಲಿ ಸಿಬ್ಬಂದಿ ತೋರಿದ ಅಸಭ್ಯ ವರ್ತನೆ ಕುರಿತು ಮಹಿಳೆ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಕ್ರಮ ಕೈಗೊಳ್ಳಲು ಮನವಿ ಮಾಡಿಕೊಂಡಿದ್ದಾರೆ.
