
ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕದ ಪದ್ಮಡ್ಕ ಎಂಬಲ್ಲಿ ಕೆಲ ದಂಧೆಕೋರರು ತಡರಾತ್ರಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದು ಜಖಂಗೊಂಡಿದೆ. ಖದೀಮರು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಮಂಗಳೂರು, ಮಾರ್ಚ್.25: ನಾಲ್ಕು ಗೋವುಗಳನ್ನು ಹಿಂಸಾತ್ಮಕವಾಗಿ ಸ್ವಿಫ್ಟ್ ಕಾರಿನಲ್ಲಿ (Swift Car) ತುಂಬಿ ಕೊಂಡು ಅಕ್ರಮವಾಗಿ ಸಾಗಾಟ ಮಾಡುವಾಗ ಕಾರು ಪಲ್ಟಿಯಾದ ಘಟನೆ . ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕದ ಪದ್ಮಡ್ಕ ಎಂಬಲ್ಲಿ ನಡೆದಿದೆ.ಕೆಲ ದಂಧೆಕೋರರು ತಡರಾತ್ರಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದು ಜಖಂಗೊಂಡಿದೆ. ಖದೀಮರು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋವುಗಳ ಸಹಿತ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

