Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

JNU Elections: ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಎಡಪಕ್ಷ ಬೆಂಬಲಿತ ಗುಂಪಿಗೆ ಭರ್ಜರಿ ಗೆಲುವು

editor tv by editor tv
March 25, 2024
in ರಾಷ್ಟ್ರೀಯ
0
JNU Elections: ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಎಡಪಕ್ಷ ಬೆಂಬಲಿತ ಗುಂಪಿಗೆ ಭರ್ಜರಿ ಗೆಲುವು
1.9k
VIEWS
Share on FacebookShare on TwitterShare on Whatsapp

ಗೆಲುವಿನ ನಂತರ ಸುದ್ದಿಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಧನಂಜಯ್, “ಈ ಗೆಲುವು ಜೆಎನ್‌ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜನಾಭಿಪ್ರಾಯವಾಗಿದೆ. ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ದೆಹಲಿ ಮಾರ್ಚ್ 25: ಜವಾಹರ್ಲಾಲ್ ನೆಹರು ವಿಶ್ವವಿದ್ಯಾನಿಲಯ (JNU) ವಿದ್ಯಾರ್ಥಿ ಒಕ್ಕೂಟ(JNUSU) ಚುನಾವಣೆಯಲ್ಲಿ ಎಡಪಕ್ಷ ಬೆಂಬಲಿತ ಗುಂಪು ಭರ್ಜರಿ ಗೆಲುವು ಸಾಧಿಸಿದೆ. ಸುಮಾರು ಮೂರು ದಶಕಗಳ ನಂತರ ಪ್ರಸ್ತುತ ವಿವಿಯಲ್ಲಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ದಲಿತ (Dalit) ವಿದ್ಯಾರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ. ಯುನೈಟೆಡ್ ಲೆಫ್ಟ್  (United Left) ಗುಂಪು ಭಾನುವಾರ ಜೆಎನ್‌ಯುಎಸ್‌ಯು ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ  ಎಬಿವಿಪಿಯನ್ನು(ABVP) ಸೋಲಿಸಿತು.

ನಾಲ್ಕು ವರ್ಷಗಳ ಗ್ಯಾಪ್ ನಂತರ ನಡೆದ ಚುನಾವಣೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಧನಂಜಯ್ ಅವರು 1,676 ಮತಗಳನ್ನು ಗಳಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (ಎಬಿವಿಪಿ) ಉಮೇಶ್ ಸಿ ಅಜ್ಮೀರಾ ವಿರುದ್ಧ 2,598 ಮತಗಳನ್ನು ಪಡೆಯುವ ಮೂಲಕ ಜೆಎನ್‌ಯುಎಸ್‌ಯು ಅಧ್ಯಕ್ಷ ಸ್ಥಾನ ಗೆದ್ದಿದ್ದಾರೆ.

#WATCH | Celebrations in JNU campus after Left wins all four seats in the JNU Students' Union Election.

(Left’s) Dhananjay was elected to the post of President, (Left’s) Avijit Ghosh was elected to the post of Vice-President. Priyanshi Arya (BAPSA Left Supported) was elected as… pic.twitter.com/cAliJIAjuE

— ANI (@ANI) March 24, 2024

1996-97ರಲ್ಲಿ ಚುನಾಯಿತರಾದ ಬಟ್ಟಿ ಲಾಲ್ ಬೈರ್ವಾ ನಂತರ ಎಡಪಕ್ಷದಿಂದ ಮೊದಲ ದಲಿತ ಅಧ್ಯಕ್ಷರಾಗಿದ್ದಾರೆ ಧನಂಜಯ್. School of Arts and Aesthetics ಪಿಎಚ್‌ಡಿ ವಿದ್ಯಾರ್ಥಿಯಾಗಿರುವ ಧನಂಜಯ್ ಬಿಹಾರದ ಗಯಾ ಮೂಲದವರಾಗಿದ್ದಾರೆ.

ಗೆಲುವಿನ ನಂತರ ಪಿಟಿಐ ಜೊತೆ ಮಾತನಾಡಿದ ಧನಂಜಯ್, “ಈ ಗೆಲುವು ಜೆಎನ್‌ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜನಾಭಿಪ್ರಾಯವಾಗಿದೆ. ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.

“ಕ್ಯಾಂಪಸ್‌ನಲ್ಲಿ ಮಹಿಳೆಯರ ಸುರಕ್ಷತೆ, ನಿಧಿ ಕಡಿತ, ವಿದ್ಯಾರ್ಥಿವೇತನ ಹೆಚ್ಚಳ, ಮೂಲಸೌಕರ್ಯ ಮತ್ತು ನೀರಿನ ಬಿಕ್ಕಟ್ಟು ಪರಿಹಾರ ವಿದ್ಯಾರ್ಥಿಗಳ ಒಕ್ಕೂಟದ ಪ್ರಮುಖ ಆದ್ಯತೆಗಳಲ್ಲಿ ಸೇರಿವೆ” ಎಂದು ಅವರು ಹೇಳಿದರು.

‘ಲಾಲ್ ಸಲಾಂ’ ಮತ್ತು ‘ಜೈ ಭೀಮ್’ ಘೋಷಣೆಗಳ ನಡುವೆ ವಿಜೇತ ವಿದ್ಯಾರ್ಥಿಗಳನ್ನು ಅವರ ಬೆಂಬಲಿಗರು ಶ್ಲಾಘಿಸಿದರು. ಅಭ್ಯರ್ಥಿಗಳ ಗೆಲುವು ಸಂಭ್ರಮಾಚಾರಣೆ ವೇಳೆ ವಿದ್ಯಾರ್ಥಿಗಳು ಕೆಂಪು, ಬಿಳಿ ಮತ್ತು ನೀಲಿ ಬಾವುಟಗಳನ್ನು ಬೀಸಿ ಘೋಷಣೆ ಕೂಗಿದ್ದಾರೆ.

ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್‌ಎಫ್‌ಐ) ಅವಿಜಿತ್ ಘೋಷ್ ಅವರು ಎಬಿವಿಪಿಯ ದೀಪಿಕಾ ಶರ್ಮಾ ಅವರನ್ನು 927 ಮತಗಳಿಂದ ಸೋಲಿಸಿ ಉಪಾಧ್ಯಕ್ಷ ಸ್ಥಾನವನ್ನು ಗೆದ್ದಿದ್ದಾರೆ. ಶರ್ಮಾ ಅವರ 1,482 ಮತಗಳ ವಿರುದ್ಧ ಘೋಷ್ ಅವರು 2,409 ಮತಗಳನ್ನು ಪಡೆದರು. ಎಡಪಕ್ಷಗಳ ಬೆಂಬಲಿತ ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿಗಳ ಸಂಘದ (ಬಾಪ್ಸಾ) ಅಭ್ಯರ್ಥಿ ಪ್ರಿಯಾಂಶಿ ಆರ್ಯ ಅವರು ಎಬಿವಿಪಿಯ ಅರ್ಜುನ್ ಆನಂದ್ ಅವರನ್ನು 926 ಮತಗಳಿಂದ ಸೋಲಿಸುವ ಮೂಲಕ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಗೆದ್ದಿದ್ದಾರೆ. ಆರ್ಯ 2,887 ಮತಗಳನ್ನು ಪಡೆದರೆ, ಆನಂದ್ 1961 ಮತಗಳನ್ನು ಪಡೆದರು.

Previous Post

ದಕ್ಷಿಣ ಕನ್ನಡ : ಚುನಾವಣೆ ಪ್ರಚಾರದ ಉಸ್ತುವಾರಿಯಾಗಿ ರಮಾನಾಥ ರೈ ನೇಮಕ

Next Post

ಕೇಂದ್ರ ಸರ್ಕಾರವೇ ಚಿಕ್ಕಬಳ್ಳಾಪುರಕ್ಕೆ ಬಂದರೂ ಡಾ.ಸುಧಾಕರ್ ಪಾರ್ಲಿಮೆಂಟ್‌ಗೆ ಹೋಗಲು ಬಿಡಲ್ಲ; ಶಾಸಕ ಪ್ರದೀಪ್ ಈಶ್ವರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.