
ಲೋಕಸಭೆ ಚುನಾವಣೆ ಹೊತ್ತಿನಲ್ಲಿ ತಮಿಳುನಾಡಿನಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ (Erode) ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಗಣೇಶ್ ಮೂರ್ತಿ ಅವರು ಎಂಡಿಎಂಕೆ (Marumalarchi Dravida Munnetra Kazhagam) ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.
2024ರ ಸಂಸತ್ ಚುನಾವಣೆಯಲ್ಲಿ ತಮಗೆ ಮತ್ತೊಮ್ಮೆ ಸೀಟು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಈ ಬಾರಿ ಡಿಎಂಕೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಿದೆ. ಸೀಟು ಸಿಗದಿರೋದಕ್ಕೆ ಹತಾಸೆಗೊಂಡು ಮಾರ್ಚ್ 24ರಂದು ಆತ್ಮಹತ್ಯೆಗೆ ಯತ್ನಿಸಿದ್ದರು.

ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿತ್ತು. ನಂತರ ಇವರ ಕುಟುಂಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಇಂದು ಮುಂಜಾನೆ 5 ಗಂಟೆಗೆ ಹಠಾತ್ ಹೃದಯಾಘಾತವಾಗಿ ಗಣೇಶಮೂರ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
