
ಮಂಗಳೂರು: . ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಲ್ಲಿಸಿರುವ ನಾಮಪತ್ರ ಅಫಿಡವಿಟ್ ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.

ಬ್ರಿಜೇಶ್ ಚೌಟ ಆಸ್ತಿ ವಿವರ ಹೀಗಿದೆ
ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ.
ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ.
ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ.
ಒಟ್ಟು 9,62,010 ರೂ. ಗಳ ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.
ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ.
ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.

ಉಳ್ಳಾಲ ತಾಲೂಕಿನ ತಲಪಾಡಿಯಲ್ಲಿ ಐದು ಕಡೆ ಒಟ್ಟು 152 ಸೆಂಟ್ಸ್ ಕೃಷಿ ಭೂಮಿ ಹೊಂದಿದ್ದು, ಇದರ ಪ್ರಸಕ್ತ ಮಾರುಕಟ್ಟೆ ಮೌಲ್ಯ 43.50 ಲ.ರೂ. ಆಗಿದೆ. ಕ್ಯಾ| ಚೌಟ ಮೇಲೆ 2017ರಲ್ಲಿ ಮೈಸೂರಿನ ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಹೈಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿದೆ.
ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ಕ್ಯಾ| ಚೌಟ 2002 ರಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ, ಬಳಿಕ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ತರಬೇತಿ ಪಡೆದು 2003ರಿಂದ 2010ರ ವರೆಗೆ ಗೂರ್ಖ ರೈಫಲ್ಸ್ ರೆಜಿಮೆಂಟ್ನಲ್ಲಿ ಆರ್ಮಿ ಅಧಿಕಾರಿಯಾಗಿದ್ದರು. ನಿವೃತ್ತರಾದ ಬಳಿಕ 2014ರಲ್ಲಿ ಇಂದೋರ್ನ ಐಐಎಂನಲ್ಲಿ ಪದವಿ ಪಡೆದಿದ್ದಾರೆ. ಅವಿವಾಹಿತರಾಗಿದ್ದು, ವಾಟ್ಸ್ಆ್ಯಪ್, ಎಕ್ಸ್, ಇನ್ಸ್ಟಾಗ್ರಾಮ್, ಫೇಸ್ಬುಕ್, ಯುಟ್ಯೂಬ್ಗಳಲ್ಲಿ ಖಾತೆ ಹೊಂದಿದ್ದಾರೆ.