
ತೈವಾನ್‌ನಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಅಲ್ಲಿನ ಸ್ಥಳೀಯ ಕಾಲಮಾನ 8 ಗಂಟೆಗೆ ಪೂರ್ವ ತೈವಾನ್‌ನಲ್ಲಿ 7.4 ತೀವ್ರತೆಯ ಭೂಕಂಪನ ಸಂಭವಿಸಿದೆ.
ಭೂಕಂಪನದ ಹಿನ್ನೆಲೆಯಲ್ಲಿ ಪೂರ್ವ ತೈವಾನ್ ಹಾಗೂ ಜಪಾನ್ ದಕ್ಷಿಣ ಭಾಗದಲ್ಲಿ ಸುನಾಮಿ ಅಲರ್ಟ್ ಘೋಷಿಸಲಾಗಿದೆ. ಸದ್ಯ ಭೂಕಂಪನದ ತೀವ್ರತೆಗೆ ಕಟ್ಟಡಗಳು ನೆಲಸಮವಾಗಿದೆ. ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಕಳೆದ 25 ವರ್ಷಗಳಲ್ಲೇ ಅತೀ ತೀವ್ರ ಪ್ರಮಾಣದ ಭೂಕಂಪನ ಇದಾಗಿದೆ ಎನ್ನಲಾಗ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ.


