
ಇಂದು ಜೈಪುರ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ರು.

ಆರ್ಸಿಬಿ ಪರ ಓಪನರ್ ಆಗಿ ಬಂದ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಉದ್ಧಕ್ಕೂ ರಾಜಸ್ತಾನ್ ಬೌಲರ್ಗಳ ಬೆಂಡೆತ್ತಿದ್ರು. ಬರೋಬ್ಬರಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಕ್ರೀಸ್ನಲ್ಲಿದ್ದ ಕೊಹ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿಗಳ ಸುರಿಮಳೆಗೈದರು.

ತಾನು ಆಡಿದ 67 ಬಾಲ್ನಲ್ಲಿ ಬರೋಬ್ಬರಿ 4 ಸಿಕ್ಸರ್, 9 ಫೋರ್ಗಳ ಸಮೇತ 100 ರನ್ ಗಳಿಸಿದ್ರು. 2024ರ ಐಪಿಎಲ್ ಸೀಸನ್ನಲ್ಲಿ ಮೊದಲ ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು ಕೊಹ್ಲಿ. ಇವರ ಸ್ಟ್ರೈಕ್ ರೇಟ್ 150ಕ್ಕೂ ಹೆಚ್ಚು ಇತ್ತು.


