
ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿತಪ್ಪಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ (H. D. Kumaraswamy) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತುರುವೇಕೆರೆ(Turuvekere)ಯಲ್ಲಿ ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಮಾತನಾಡುತ್ತಾ ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದಿದ್ದಾರೆ.

ತುಮಕೂರು, ಏ.13: ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿತಪ್ಪಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ (H. D. Kumaraswamy) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತುರುವೇಕೆರೆ(Turuvekere)ಯಲ್ಲಿ ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ ಎಂದಿದ್ದಾರೆ.

