
ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರು ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ಶೋ ನಡೆಸಿದರು .

ಮಂಗಳೂರು, ಏಪ್ರಿಲ್ 14: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ಶೋ ನಡೆಸಿದ್ದಾರೆ. ಎಡಿಜಿಪಿ ಚಂದ್ರಶೇಖರ್, ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಅಂತಿಮ ಹಂತದ ಭದ್ರತೆ ಪರಿಶೀಲಿಸಲಾಗಿದೆ. ಉತ್ಸಾಹದಿಂದ ಮೋದಿಗಾಗಿ ಲಾಲ್ಬಾಗ್ ಜಂಕ್ಷನ್ನಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ಅದ್ದೂರಿ ರೋಡ್ ಶೋ ನಡೆಸಿ ಕರಾವಳಿಯ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಎರಡು ಕಿ.ಮೀ. ರೋಡ್ ಶೋ ನಲ್ಲಿ ಸಾವಿರಾರು ಜನರು ಭಾಗಿಯಾಗಿ ಪ್ರಧಾನಿ ಮೋದಿ ಅವರಿಗೆ ಜೈಕಾರ ಹಾಕಿದರು.

ಮೈಸೂರಿನಲ್ಲಿ ಅದ್ದೂರಿ ಬಿಜೆಪಿ ಮತ್ತು ಜೆಡಿಎಸ್ ಮಿತ್ರಪಕ್ಷಗಳ ಸಮಾವೇಶದಲ್ಲಿ ಭಾಗಿಯಾಗಿ ವಿಶೇಷ ವಿಮಾನವೇರಿ ಬಂದ ಪ್ರಧಾನಿ ಮೋದಿ ಅವರು ನಾರಾಯಣಗುರು ವೃತ್ತದಿಂದ ಅಲಂಕೃತ ವಿಶೇಷ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ವಾಹನದಲ್ಲಿ ಕರಾವಳಿಯ ಬಿಜೆಪಿ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಬ್ರಿಜೇಶ್ ಚೌಟ ಅವರು ನಿಂತಿದ್ದರು

ಕೈಯಲ್ಲಿ ಹೊಳೆಯುವ ಕಮಲದ ಚಿಹ್ನೆ ಹಿಡಿದುಕೊಂಡಿದ್ದ ಮೋದಿ ಅವರು ಹಸನ್ಮುಖರಾಗಿ ಎಲ್ಲರತ್ತ ಕೈ ಬೀಸುತ್ತಾ ಸಾಗಿದರು. ರೋಡ್ ಶೋ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರಧಾನಿ ಮೋದಿ ಅವರ ಮೇಲೆ ನಿರಂತರ ಪುಷ್ಪ ವೃಷ್ಟಿ ಗೈದರು. ಮೋದಿ ಅವರು ಕೆಲವು ಬಾರಿ ಜನರತ್ತ ಹೂವಿನ ಎಸಳುಗಳನ್ನು ಎಸೆದು ಸಂಭ್ರಮ ಮೂಡಿಸಿದರು.
ರೋಡ್ ಷೋ ವೇಳೆ ಕರಾವಳಿಯ ವಿಶೇಷ ವಾದ್ಯಗಳು, ಯಕ್ಷಗಾನ, ಹುಲಿ ವೇಷ, ಚಂಡೆ ಮೇಳಗಳು ವೈಭವ ಹೆಚ್ಚಿಸಿದವು. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಭಾರಿ ಸಂಖ್ಯೆಯಲ್ಲಿ ರೋಡ್ ಶೋ ಕಣ್ತುಂಬಿಸಿಕೊಂಡರು.

ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ, ವಂದೇ ಮಾತರಂ, ಜೈ ಶ್ರೀರಾಮ್, ನರೇಂದ್ರ ಮೋದಿ ಕಿ ಜೈ, ಬತ್ತೆರ್ ಬತ್ತೆರ್ ಮೋದಿ ಬತ್ತೆರ್ (ಬಂದ್ರು ಬಂದ್ರು ಮೋದಿ ಬಂದ್ರು) ಎನ್ನುವ ತುಳುವಿನಲ್ಲೂ ಘೋಷಣೆಗಳನ್ನು ಮೊಳಗಿಸಿದರು.



