
Murder Case: ಶಿವಮೊಗ್ಗದಲ್ಲಿ ಹಲವು ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ 45 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
ಶಿವಮೊಗ್ಗ: ನಗರದ ಬಾಪೂಜಿನಗರದ ಗಂಗಮ್ಮ ದೇವಾಲಯದ ಬಳಿ ವ್ಯಕ್ತಿಯ ಬರ್ಬರ ಹತ್ಯೆ ನಡೆದಿದೆ. ಮೂವರು ದುಷ್ಕರ್ಮಿಗಳು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಮೆಂಟಲ್ ಸೂರಿ ಅಲಿಯಾಸ್ ಸುರೇಶ್ (45) ಕೊಲೆಯಾದ ವ್ಯಕ್ತಿ. ಹಲವು ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಮೆಂಟಲ್ ಸೂರಿ ಭಾಗಿಯಾಗಿದ್ದ. ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳ ಸಹಾಯದಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

