
ಮಂಗಳೂರು: ಮಂಗಳೂರು ನಗರದ ವಿವಿದೆಡೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ರೋಡ್ಪ ಶೋ ಮೂಲಕ ಬಾರಿ ಜನಸ್ತೋಮ ದೊಂದಿಗೆ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿ ಗಳನ್ನು ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿರುವ ಕಾಂಗ್ರೆಸ್ ಮೇಲೆ ಜನರು ಭರವಸೆ ಇಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ನಾಯಕರು
ಎಐಸಿಸಿ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್. ಲೋಬೋ, ಕೆಪಿಸಿಸಿ ಸದಸ್ಯ ಟಿ.ಎಂ. ಶಹೀದ್, ಕಾರ್ಪೋರೇಟರ್ ನವೀನ್ ಡಿಸೋಜ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್ ಕೆ., ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಟಿ.ಎಂ. ಶಹೀದ್ ಮೊದಲಾದವರು ಉಪಸ್ಥಿತರಿದ್ದರು.


