
India T20 Squad: ಯುಎಸ್ಎ-ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. 15 ಸದಸ್ಯರ ತಂಡದೊಂದಿಗೆ ನಾಲ್ವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಈ 19 ಆಟಗಾರರಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ಗೆ ಸ್ಥಾನ ಕಲ್ಪಿಸಲಾಗಿಲ್ಲ.

ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಹಾಗೆಯೆ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ ಸಿಎಸ್ಕೆ ಪರ ಭರ್ಜರಿ ಪ್ರದರ್ಶನ ನೀಡಿರುವ ಶಿವಂ ದುಬೆಗೂ ತಂಡದಲ್ಲಿ ಸ್ಥಾನ ಲಭಿಸಿದೆ

ಮತ್ತೊಂದೆಡೆ ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಹಾಗೂ ಅವೇಶ್ ಖಾನ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಅಂದರೆ 15 ಸದಸ್ಯರ ತಂಡದಿಂದ ಯಾರಾದರು ಹೊರಬಿದ್ದರೆ ಈ ನಾಲ್ವರು ಆಟಗಾರರಿಂದ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಇದಾಗ್ಯೂ ಈ ಬಳಗದಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ಗೆ ಸ್ಥಾನ ಕಲ್ಪಿಸಲಾಗಿಲ್ಲ.
ಹಾಗೆಯೇ ಈ ಬಾರಿಯ ಐಪಿಎಲ್ ಮೂಲಕ ಮಿಂಚಿದ್ದ ವೇಗದ ಬೌಲರ್ ಮಯಾಂಕ್ ಯಾದವ್ ಅವರನ್ನು ಸಹ ಆಯ್ಕೆಗೆ ಪರಿಗಣಿಸಲಾಗಿಲ್ಲ. ಬದಲಾಗಿ ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾಗೆ ಸ್ಥಾನ ನೀಡಲಾಗಿದೆ.

ಇನ್ನು ಸ್ಪಿನ್ನರ್ಗಳಾಗಿ ಕುಲ್ದೀಪ್ ಯಾದವ್ ಹಾಗೂ ಯುಜ್ವೇಂದ್ರ ಚಹಲ್ ಸ್ಥಾನ ಪಡೆದರೆ, ಸ್ಪಿನ್ ಆಲ್ರೌಂಡರ್ಗಳಾಗಿ ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ. ಹಾಗೆಯೇ ವೇಗದ ಬೌಲಿಂಗ್ ಆಲ್ರೌಂಡರ್ಗಳಾಗಿ ಟೀಮ್ ಇಂಡಿಯಾ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಕಾಣಿಸಿಕೊಂಡಿದ್ದಾರೆ.
ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

